ಪುಣ್ಯಭೂಮಿಯೆ, ನಿನ್ನ ಪುಣ್ಯಗಂಧವನಖಿಲ
ಭುವನದೊಳ್ ಪಸರಿಸುತ ನಲಿವುದೆಂದು ।
ಆರ್ಯಕುಲಜರೆ, ನಿಮ್ಮ ನಿಜಧರ್ಮದೀಪಮಂ
ಮರಳಿ ಬೆಳಗಿಸಿ ಗುರುತೆವಡೆವುದೆಂದು ।
ವೇದಜನನಿಯೆ, ನಿನ್ನ ದಿವ್ಯಗಾನವ ಕೇಳೆ ।
ಜಗವೆಲ್ಲ ತಲೆವಾಗಿ ಬರುವುದೆಂದು ।
ವೇದಾಂತಕೇಸರಿಯೆ, ನಿದ್ರೆಯಂ ತೊರೆದು ನೀಂ
ಗುಹೆಯಿಂದ ಪೊರಮಟ್ಟು ಮೆರೆವುದೆಂದು
ಜಗವೆಲ್ಲ ತಲೆವಾಗಿ ಬರುವುದೆಂದು ।
ವೇದಾಂತಕೇಸರಿಯೆ, ನಿದ್ರೆಯಂ ತೊರೆದು ನೀಂ
ಗುಹೆಯಿಂದ ಪೊರಮಟ್ಟು ಮೆರೆವುದೆಂದು
ಇಂತು ನಿಜಜನಪದವನೆಳ್ಚರಂಗೊಳಿಸುತನಿಶಂ ।
ಭರತಮಾತೆಯ ಜೈತ್ರಯಾತ್ರೆಯೊಳ್ ಪ್ರಮುಖನೆನಿಸಿ ।
ವಿಬುಧವಂದಿತನಾಗಿ ಲೋಕಸಂಮಾನ್ಯನಾಗಿ ।
ಶ್ರೀ ವಿವೇಕಾನಂದನೆಸೆದನಂದು ॥
No comments:
Post a Comment