Devanahalli Venkataramanaiah Gundappa, popularly known as DVG, was a Kannada writer and philosopher. He is best known for Manku Thimmana Kagga, a collection of verses.
DVG was born in 1887 in Mulbagal/Mulabagilu taluk of Kolar district in the Indian state of Karnataka. He completed his primary school education in Kannada in 1898. He also leasrned English and Sanskrit as a result of his own interest. Later he continued his education in Mysore from the Maharaja
high school. Despite failing to pass the matriculation exam (10th
Standard) and discontinuing his formal education after that, his essays
were selected as chapters for Graduation text books and as subjects of
reserch theses.
He was closely associated with the Gokale institute of Public
Affairs, Bangalore. Sri Nittoor Srinivasa Rao, The then Chief Justice of
Karnataka, Sri Masti Venkatesa Iyengar, V.T.Srinivasan, the Principal of Vijaya College, Bangalore were some of his close associates.
DVG died on 7 October 1975. Chief Minister
and several minsters of the state of Karnataka came to pay their last
respects at his residence in Nagasandra road (now called DVG Road) in Basavanagudi.
D. V. G wrote a sequel to Mankuthimmana Kagga, known as Marula Muniyana Kagga. He also wrote Srimad BhagavadGeeta Tatparya, also known as Jeevana Dharma Yoga, which has received the Kendra Sahitya Academy award.
Gundappa was awarded Padmabhushan by the Government of India in 1974. The State of Karnataka under Chief Minister Sri Veerandra Patil honored him for his services to Kannada literature in 1970 at Ravindra Kalkshetra, Bengaluru and awarded a purse of Rs 90,000. DVG donated the entire award money to found the Gokhale Institute of Public Affairs (GIPA) located in Bull Temple Road, Basavanagudi, India. India Post issued a commemorative stamp of Dr. Gundappa in 1988.In 2003, a statue was erected to honor DVG in Bugle Rock Park, Basavanagudi.
****
ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಪ್ರಸಿದ್ಧರಾದವರು.
ಡಿ ವಿ ಜಿ ಅವರು ೧೮೮೭, ಮಾರ್ಚ್ ೧೭ ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.
ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ.
ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು.
ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು.
ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು "ಸೂರ್ಯೋದಯ ಪ್ರಕಾಶಿಕ"
ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ ನಡೆಯಲಿಲ್ಲ.
ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ ಬರೆಯಬೇಕಿತ್ತು.
ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆದರು.
ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. "ವೀರಕೇಸರಿ" ಯಲ್ಲಿ ಕಾರ್ಯ ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ "ಹಿಂದೂ" ಪತ್ರಿಕೆಗೆ ಬರೆದರು. ನಂತರ "ಮೈಸೂರು ಟೈಮ್ಸ್" ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.
ಕನ್ನಡ ಕಾವ್ಯಕ್ಷೇತ್ರದಲ್ಲಿ "ಮಂಕುತಿಮ್ಮನ ಕಗ್ಗ" ಹಾಗೂ "ಮರುಳ ಮುನಿಯನ ಕಗ್ಗ" ದ ಮೂಲಕ ಡಿ ವಿ ಜಿ ಮನೆಯ ಮಾತಾದವರು
ಡಿ ವಿ ಜಿ ಅವರನ್ನು ಆಧುನಿಕ ಭಾರತೀಯ ಸಾಹಿತ್ಯದ ಒಂದು ಅಶ್ವತ್ಥ ವೃಕ್ಷ ಎಂದು
ಕರೆಯುತ್ತಾರೆ. ಡಿ ವಿ ಜಿ ಅವರ ವಿದ್ವತ್ತು ಹಾಗೂ ಚಿಂತನೆ ಕಂಡವರು ಒಬ್ಬ ಋಷಿ
ಎಂದಿದ್ದಾರೆ. ಅವರ ಸಾಹಿತ್ಯ ಬಾಳಿಗೊಂದು ನಂಬಿಕೆಯನ್ನೂ, ಭರವಸೆಯನ್ನೂ ಕೊಟ್ಟಿದೆ. ಹಾ.ಮಾ.ನಾಯಕರು "ಡಿ ವಿ ಜಿ ಅವರದು ಸತ್ಯ ಶಿವ ಸೌಂದರ್ಯಗಳು ಸಮಹಿತವಾದ ಸಾಹಿತ್ಯ" ಎಂದಿದ್ದಾರೆ.
ಕರ್ನಾಟಕ
ಸರ್ಕಾರ ಡಿ ವಿ ಜಿ ಅವರ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಮಗ್ರ ಸಾಹಿತ್ಯ ಸಂಪುಟ
ಹೊರತರುವ ಯೋಜನೆ ಹಮ್ಮಿಕೊಂಡಿದೆ. ಈ ಪ್ರಕಾರ "ಡಿ ವಿ ಜಿ ಕೃತಿ ಶ್ರೇಣಿ"ಯಲ್ಲಿ ವಿಚಾರ,
ವಿಮರ್ಶೆ, ನಾಟಕ, ಶಿಶು ಸಾಹಿತ್ಯ, ಜೀವನ ಚರಿತ್ರೆಗಳು, ಕಾವ್ಯ ೧-೨, ನೆನಪಿನ
ಚಿತ್ರಗಳು, ಸಂಕೀರ್ಣ ಹೊರತಂದಿದೆ.
ಕನ್ನಡದ ವಿಜ್ಞಾನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ಕೊಟ್ಟ ಬಿ ಜಿ ಎಲ್ ಸ್ವಾಮಿ, ಡಿ ವಿ ಜಿ ಅವರ ಪುತ್ರರು. ತಮ್ಮ ಜೀವನ ಅಂತ್ಯದ ವರೆಗೂ ಮದರಾಸಿನಲ್ಲೇ ಕಾಲ ಕಳೆದ ಸ್ವಾಮಿ ಕನ್ನಡ ಸಾಹಿತ್ಯ ಕಂಡ ಅಪರೂಪದ ಬರಹಗಾರರು.
No comments:
Post a Comment